ADVERTISEMENT

ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಆಸ್ಪತ್ರೆಗಳ ತೀವ್ರ ಕೊರತೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2011, 19:30 IST
Last Updated 2 ಜೂನ್ 2011, 19:30 IST

ನವದೆಹಲಿ (ಪಿಟಿಐ): ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಆಸ್ಪತ್ರೆಗಳನ್ನು ಸ್ಥಾಪಿಸುವ ವಿಷಯದಲ್ಲಿ ಕೇಂದ್ರ ಸರ್ಕಾರ ಮೌನವಹಿಸಿರುವ ಕುರಿತು ಸಂಸದೀಯ ಸ್ಥಾಯಿ ಸಮಿತಿ ಅಸಮಧಾನ ವ್ಯಕ್ತಪಡಿಸಿದೆ.

ನಕ್ಸಲ್ ಪೀಡಿತ ಪ್ರದೇಶಗಳಲ್ಲಿನ ಉತ್ತಮ ಆರೋಗ್ಯ ಕೇಂದ್ರಗಳ ಕೊರತೆ ಇರುವುದು ಸರ್ಕಾರದ ವಿರುದ್ಧ ಜನರಲ್ಲಿ ಅತೃಪ್ತಿ ಮೂಡಲು ಕಾರಣವಾಗಿದೆ. ಮಾವೊವಾದಿಗಳ ಪ್ರಭಾವವಿರುವ ಪ್ರದೇಶಗಳಲ್ಲಿ ಪ್ರಸ್ತುತವಿರುವ ಯೋಜನೆಗಳು ಮತ್ತು ನೂತನ ಯೋಜನೆಗಳ ಅಡಿಯಲ್ಲಿ ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ವಿಶೇಷ ಪ್ಯಾಕೇಜ್‌ಗಳ ಅಗತ್ಯವಿದೆ ಎಂದು ಗೃಹ ವ್ಯವಹಾರಗಳ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿ ಗುರುವಾರ ರಾಜ್ಯಸಭಾ ಅಧ್ಯಕ್ಷ ಹಮೀದ್ ಅನ್ಸಾರಿ ಅವರಿಗೆ ಸಲ್ಲಿಸಿದ ತನ್ನ ವರದಿಯಲ್ಲಿ ತಿಳಿಸಿದೆ.

ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಉಪ ಕೇಂದ್ರಗಳನ್ನು ಪ್ರಾರಂಭಿಸುವ ಅಗತ್ಯವಿದೆ. ಹೊಸ ವೈದ್ಯರುಗಳಿಗೆ ಹೆಚ್ಚಿನ ಸವಲತ್ತುಗಳನ್ನು ಒದಗಿಸವ ಮೂಲಕ ಅಂತಹ ಪ್ರದೇಶದಲ್ಲಿ ಸೇವೆ ಸಲ್ಲಿಸುವುದನ್ನು ಕಡ್ಡಾಯಗೊಳಿಸಬೇಕು ಎಂದು ಸಮಿತಿ ವರದಿಯಲ್ಲಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.