ಕೋಲ್ಕತ್ತ (ಪಿಟಿಐ): ಹಿರಿಯ ನಟಿ ಸುಚಿತ್ರಾ ಸೇನ್ ಅವರ ಹೃದಯ ಬಡಿತದಲ್ಲಿ ಏರುಪೇರು ಉಂಟಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಇಲ್ಲಿನ ಖಾಸಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ಸುಚಿತ್ರಾ ಅವರಿಗೆ ರೋಗನಿರೋಧಕ ಸೇರಿದಂತೆ ಇತರ ಚಿಕಿತ್ಸೆ ನೀಡಲಾಗುತ್ತಿದೆ. ಆದರೂ ಹೃದಯ ಬಡಿತದಲ್ಲಿ ಏರುಪೇರು ಉಂಟಾಗುತ್ತಿದ್ದು, ತೀವ್ರ ನಿಗಾ ವಹಿಸಲಾಗಿದೆ.
ಮಂಗಳವಾರ ರಾತ್ರಿ ಸುಚಿತ್ರಾ ಅವರು ಆಹಾರ ಸೇವಿಸಿ ಚೆನ್ನಾಗಿ ನಿದ್ದೆ ಮಾಡಿದ್ದಾರೆ. ಅವರ ದೇಹದ ಜೈವಿಕ ಚಟುವಟಿಕೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. ಆದರೆ, ಅವರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯನ್ನು ಮುಂದೂಡಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.