ADVERTISEMENT

ನಾನು ಸೋಲೊಪ್ಪುವ ಪೈಕಿ ಅಲ್ಲ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2012, 19:45 IST
Last Updated 6 ಏಪ್ರಿಲ್ 2012, 19:45 IST

ನವದೆಹಲಿ (ಪಿಟಿಐ): ಉತ್ತರ ಪ್ರದೇಶ ಚುನಾವಣೆಯಲ್ಲಿ ಪಕ್ಷವು ಹೀನಾಯ ಸೋಲು ಕಂಡಿರುವುದರ ಬಗ್ಗೆ ಆತ್ಮಾವಲೋಕನ ಮಾಡಿಕೊಂಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, `ಪಕ್ಷದಲ್ಲಿ ಅಶಿಸ್ತನ್ನು ಸಹಿಸಲಾರೆ. ಅಲ್ಲದೇ ನಾನು ಸೋಲನ್ನು ಒಪ್ಪಿಕೊಳ್ಳುವ ಜಾಯಮಾನದವನಲ್ಲ. ಮತ್ತೆ ಪಕ್ಷದ ಭವಿಷ್ಯ ಉಜ್ವಲಗೊಳಿಸಲು ಪ್ರಯತ್ನಿಸುತ್ತೇನೆ~ ಎಂದು ಶಪಥ ಮಾಡಿದ್ದಾರೆ.

ಕೇಂದ್ರದ ಸಚಿವರು ಚುನಾವಣಾ ಪ್ರಚಾರದ ವೇಳೆ ನೀಡಿದ ವಿವಾದಾತ್ಮಕ ಹೇಳಿಕೆಗಳೂ ಉತ್ತರ ಪ್ರದೇಶದಲ್ಲಿ ಪಕ್ಷದ ಸೋಲಿಗೆ ಒಂದು ಕಾರಣ ಎಂದು ಶುಕ್ರವಾರ ರಾತ್ರಿ ನಡೆದ ಪಕ್ಷದ ಪುನರ್‌ಪರಿಶೀಲನಾ ಸಭೆಯಲ್ಲಿ ರಾಜ್ಯದ ಹಲವು ನಾಯಕರು ಅಸಮಾಧಾನ ವ್ಯಕ್ತಪಡಿಸಿದರು. ಇದೇ ವೇಳೆ ಮಾಜಿ ಸಂಸದ ರಾಜೇಶ್ ಮಿಶ್ರಾ ಹಾಗೂ ರಾಹುಲ್ ಗಾಂಧಿ ಅವರು ಪಕ್ಷದ ರಾಜ್ಯ ಘಟಕವನ್ನು ಪುನರ್‌ರಚಿಸುವ ಸೂಚನೆಯನ್ನೂ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.