ADVERTISEMENT

ನಾಲ್ವರು ನಕ್ಸಲರ ಹತ್ಯೆ

ಪಿಟಿಐ
Published 26 ಫೆಬ್ರುವರಿ 2018, 20:03 IST
Last Updated 26 ಫೆಬ್ರುವರಿ 2018, 20:03 IST

ರಾಂಚಿ: ಪಲಮು ಜಿಲ್ಲೆಯಲ್ಲಿ ಸೋಮವಾರ ನಡೆದ ಮುಖಾಮುಖಿಯಲ್ಲಿ ಇಬ್ಬರು ಮಹಿಳೆಯರು ಸೇರಿ ನಾಲ್ವರು ನಕ್ಸಲರನ್ನು ಭದ್ರತಾ ಪಡೆ ಹತ್ಯೆ ಮಾಡಿದೆ.

ಕೇಂದ್ರೀಯ ಮೀಸಲು ಪೊಲೀಸ್ ಪಡೆ ಮತ್ತು ರಾಜ್ಯ ಪೊಲೀಸರು ಜೊತೆಯಾಗಿ ಬೆಳಿಗ್ಗೆ ಸುಮಾರು 8.30ಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ.

‘ಹತ್ಯೆಯಾದ ನಕ್ಸಲ್ ಒಬ್ಬನ ಬಳಿ ₹ 5 ಲಕ್ಷ ನಗದು ಇತ್ತು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎರಡು ರೈಫಲ್‌ಗಳು, 5 ಮ್ಯಾಗಜಿನ್‌ಗಳು ಮತ್ತು 219 ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.