
ಪ್ರಜಾವಾಣಿ ವಾರ್ತೆಡೆಹ್ರಾಡೂನ್ (ಪಿಟಿಐ): ನಾಲ್ವರು ಮಾಜಿ ಕಾನ್‌ಸ್ಟೆಬಲ್‌ಗಳಿಗೆ ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯವು ಏಳು ವರ್ಷಗಳ ಕಾಲ ಕಠಿಣ ಶಿಕ್ಷೆ ವಿಧಿಸಿದೆ.
ಹದಿನೇಳು ವರ್ಷಗಳ ಹಿಂದೆ ನಡೆದ ಗಲಭೆಯಲ್ಲಿ ವ್ಯಕ್ತಿಯೊಬ್ಬನ ಹತ್ಯೆಯಾಗಿ, ಇಬ್ಬರು ತೀವ್ರವಾಗಿ ಗಾಯಗೊಂಡ ಪ್ರಕರಣ ಇದಾಗಿದೆ.
ಹತ್ಯೆಯಾದ ವ್ಯಕ್ತಿಯ ಹತ್ತಿರದ ಬಂಧುಗಳಿಗೆ ರೂ 20 ಸಾವಿರ ಮತ್ತು ಗಾಯಗೊಂಡ ವ್ಯಕ್ತಿಗಳಿಗೆ ತಲಾ ರೂ 10 ಸಾವಿರ ಪರಿಹಾರ ನೀಡುವಂತೆಯೂ ಕೋರ್ಟ್ ಆದೇಶಿಸಿದೆ.
ಅಲಹಾಬಾದ್ ಹೈಕೋರ್ಟ್ ನಿರ್ದೇಶನದಂತೆ ಈ ಪ್ರಕರಣದ ತನಿಖೆಯನ್ನು ಸಿಬಿಐ 1995ರ ಜನವರಿ 25ರಂದು ತೆಗೆದುಕೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.