ನವದೆಹಲಿ (ಪಿಟಿಐ): ಭಾರತ ಮತ್ತು ಜಪಾನ್ ಶುಕ್ರವಾರದಿಂದ ತಮ್ಮ ಐದನೇ ತಂತ್ರಗಾರಿಕೆ ಮಾತುಕತೆಯನ್ನು ಆರಂಭಿಸಲಿದ್ದು, ಈ ಸಂದರ್ಭದಲ್ಲಿ ನಾಗರಿಕ ಪರಮಾಣು, ವ್ಯಾಪಾರ ಹಾಗೂ ಭದ್ರತೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರ ಹೆಚ್ಚಿಸಲು ಮಾರ್ಗೋಪಾಯ ಕಂಡುಕೊಳ್ಳುವ ಬಗ್ಗೆ ಚರ್ಚೆ ನಡೆಸಲಿವೆ.
ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಮತ್ತು ಜಪಾನ್ ವಿದೇಶಾಂಗ ಸಚಿವ ಕೊಯಿಚಿರೊ ಗೆಂಬೊ ನೇತೃತ್ವದಲ್ಲಿ 2 ದಿನಗಳ ಕಾಲ ಈ ಸಮಾಲೋಚನೆ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.