ADVERTISEMENT

ನಿಗೂಢ ರೋಗ: 13 ಮಕ್ಕಳ ಸಾವು

​ಪ್ರಜಾವಾಣಿ ವಾರ್ತೆ
Published 18 ಜೂನ್ 2011, 19:30 IST
Last Updated 18 ಜೂನ್ 2011, 19:30 IST

ಪಟ್ನಾ, (ಐಎಎನ್‌ಎಸ್): ಕಳೆದ ಐದು ದಿನಗಳಲ್ಲಿ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ನಿಗೂಢ ಕಾಯಿಲೆಯಿಂದ 13 ಮಕ್ಕಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಇವರಲ್ಲಿ ಐವರು ಮಕ್ಕಳು 48 ಗಂಟೆಗಳಲ್ಲೇ ಬಲಿಯಾಗಿದ್ದಾರೆ.

ಕಳೆದ 5 ದಿನಗಳಲ್ಲಿ ಒಟ್ಟು 13 ಮಕ್ಕಳು ನಿಗೂಢ ಕಾಯಿಲೆಯಿಂದ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಕ್ಕಳು ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ತಿಳಿಸಿದ್ದಾರೆ.

ಮುಜಾಫರ್‌ಪುರದಿಂದ ಜಿಲ್ಲಾ ಸರ್ಜನ್ ಎ.ಪಿ. ಸಿಂಗ್ ಸುದ್ದಿಸಂಸ್ಥೆಯೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಈ ಸಾವಿಗೆ ನಿಖರವಾದ ಕಾರಣ ಇದುವರೆಗೂ ತಿಳಿದು ಬಂದಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.