ADVERTISEMENT

ನಿತಾರಿ: ಕೋಲಿಗೆ ಗಲ್ಲು ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2012, 19:59 IST
Last Updated 24 ಡಿಸೆಂಬರ್ 2012, 19:59 IST

ಗಾಜಿಯಾಬಾದ್ (ಐಎಎನ್‌ಎಸ್): ದೇಶವನ್ನು ತಲ್ಲಣಗೊಳಿಸಿದ್ದ ನಿತಾರಿ ಅತ್ಯಾಚಾರ ಮತ್ತು ಮಹಿಳೆಯರ ಸರಣಿ ಕೊಲೆ ಪ್ರಕರಣದ ಆರೋಪಿ ಸುರೇಂದ್ರ ಕೋಲಿಗೆ ಸಿಬಿಐ ವಿಶೇಷ ನ್ಯಾಯಾಲಯ ಸೋಮವಾರ ಗಲ್ಲು ಶಿಕ್ಷೆ ವಿಧಿಸಿದೆ.

2005-06ರಲ್ಲಿ ನಡೆದ ಐದು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಏಕೈಕ ಆರೋಪಿಯಾಗಿರುವ ಕೋಲಿಗೆ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್. ಲಾಲ್ ಗಲ್ಲು ಶಿಕ್ಷೆ ವಿಧಿಸಿದರು.

ನಿತಾರಿ ಸರಣಿ ಕೊಲೆ ಮತ್ತು ಅತ್ಯಾಚಾರಕ್ಕೆ ಸಂಬಂಧಿಸಿದ ಒಟ್ಟು 19 ಪ್ರಕರಣಗಳ ಪೈಕಿ 16 ಪ್ರಕರಣಗಳಲ್ಲಿ ಕೋಲಿ ಮತ್ತು ಮಣಿಂದರ್ ಸಿಂಗ್ ಪಾಂಡಾ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಸಿತ್ತು. ಆ 16 ಪ್ರಕರಣಗಳಲ್ಲಿ ಬಾಲಕಿ ಹತ್ಯೆ ಪ್ರಕರಣ ಐದನೆಯದು.

ಇನ್ನಿತರ ನಾಲ್ಕು ಪ್ರಕರಣಗಳಲ್ಲಿ ಕೋಲಿಗೆ ಕಠಿಣ ಶಿಕ್ಷೆ ವಿಧಿಸಲಾಗಿದೆ. ಕೋಲಿಯ ಮಾಲೀಕ ಮಣಿಂದರ್ ಸಿಂಗ್ ಪಾಂಡಾ ಈ ಆರು ಪ್ರಕರಣಗಳಲ್ಲಿ ಸಹ ಆರೋಪಿಯಾಗಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.