ADVERTISEMENT

ನಿಫಾ ಶಂಕೆ: ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 23 ಮೇ 2018, 19:30 IST
Last Updated 23 ಮೇ 2018, 19:30 IST

ಗದಗ: 'ನಿಫಾ' ವೈರಾಣು ಸೋಂಕು ತಗುಲಿರಬಹುದು ಎಂಬ ಶಂಕೆಯಿಂದ ವ್ಯಕ್ತಿಯೊಬ್ಬರು ಇಲ್ಲಿನ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಜಿಮ್ಸ್) ಬುಧವಾರ ಚಿಕಿತ್ಸೆಗೆ ದಾಖಲಾಗಿದ್ದಾರೆ. ವ್ಯಕ್ತಿಯ ಹೆಸರನ್ನು ವೈದ್ಯರು ಬಹಿರಂಗಪಡಿಸಿಲ್ಲ.

ಗದಗ ಮೂಲದವರಾದ ಇವರು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ನಿಫಾ ವೈರಾಣು ಹರಡಿ ಆತಂಕ ಮೂಡಿಸಿದ ಬೆನ್ನಲ್ಲೇ ಅವರು ಗದುಗಿಗೆ ಮರಳಿದ್ದರು.

'ವ್ಯಕ್ತಿ ಕೆಮ್ಮಿನಿಂದ ಬಳಲುತ್ತಿದ್ದಾರೆ. ಜ್ವರ ಸೇರಿದಂತೆ ನಿಫಾ ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಗಂಟಲು ದ್ರವ ಹಾಗೂ ರಕ್ತದ ಮಾದರಿ ಸಂಗ್ರಹಿಸಿ ಪುಣೆಯ ಎನ್ಐವಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ' ’ ಎಂದು 'ಜಿಮ್ಸ್' ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.