ADVERTISEMENT

ನಿರ್ವಹಣಾ ಮಂಡಳಿ ರಚನೆಗೆ ತಡೆ; 12ದಿನ 2 ಸಾವಿರ ಕ್ಯೂಸೆಕ್‌ ನೀರು ಹರಿಸಿ: ಸುಪ್ರೀಂ

ಉತನ್ನತಾಧಿಕಾರವುಳ್ಳ ತಾಂತ್ರಿಕ ತಂಡ ರಚನೆ, ಮೇಲುಸ್ತುವಾರಿಗೆ ಹೊಸ ಅಧ್ಯಕ್ಷರ ನೇಮಕ

ಏಜೆನ್ಸೀಸ್
Published 4 ಅಕ್ಟೋಬರ್ 2016, 17:18 IST
Last Updated 4 ಅಕ್ಟೋಬರ್ 2016, 17:18 IST
ನಿರ್ವಹಣಾ ಮಂಡಳಿ ರಚನೆಗೆ ತಡೆ; 12ದಿನ 2 ಸಾವಿರ ಕ್ಯೂಸೆಕ್‌ ನೀರು ಹರಿಸಿ: ಸುಪ್ರೀಂ
ನಿರ್ವಹಣಾ ಮಂಡಳಿ ರಚನೆಗೆ ತಡೆ; 12ದಿನ 2 ಸಾವಿರ ಕ್ಯೂಸೆಕ್‌ ನೀರು ಹರಿಸಿ: ಸುಪ್ರೀಂ   

ನವದೆಹಲಿ: ಕರ್ನಾಟಕ ಅ.7ರಿಂದ 18ರವರೆಗೆ ದಿನಂಪ್ರತಿ 2 ಸಾವಿರ ಕ್ಯೂಸೆಕ್‌ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಮಂಗಳವಾರ ಆದೇಶ ನೀಡಿರುವ ಸುಪ್ರೀಂ ಕೋರ್ಟ್‌, ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಯನ್ನು ಸಧ್ಯಕ್ಕೆ ತಡೆಹಿಡಿದು ಉನ್ನತಾಧಿಕಾರವುಳ್ಳ ತಾಂತ್ರಿಕ ತಂಡ ರಚನೆಗೆ ಅಸ್ತು ಎಂದಿದೆ. ಕಾವೇರಿ ಮೇಲುಸ್ತುವಾರಿ ಸಮಿತಿಗೆ ಹೊಸ ಅಧ್ಯಕ್ಷರನ್ನು ನೇಮಿಸಿ ವಾಸ್ತವ ಸ್ಥಿತಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸೂಚಿಸಿತು.

ಕಾವೇರಿ ನಿವರ್ಹಣಾ ಮಂಡಳಿ ರಚಿಸುವಂತೆ ನಿರ್ದೇಶನ ನೀಡುವ ಅಧಿಕಾರ ಸುಪ್ರೀಂಕೋರ್ಟ್‌ಗೆ ಇಲ್ಲ ಎಂದು ತಿಳಿಸಿರುವ ಕೇಂದ್ರ ಸರ್ಕಾರ, ಸೆ. 20 ಮತ್ತು 30ರಂದು ನೀಡಿರುವ ಆದೇಶವನ್ನು ಮಾರ್ಪಾಡು ಮಾಡುವಂತೆ ಕೋರಿ ಸೋಮವಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮಂಗಳವಾರ ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ, ಕೇಂದ್ರ ಸರ್ಕಾರದ ಮನವಿ ಅಸ್ತು ಎಂದಿದೆ.

ಕಾವೇರಿ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾಗಿ ಕೇಂದ್ರ ಜಲ ಆಯೋಗದ ಸದಸ್ಯ ಮಸೂದ್‌ ಹುಸೇನ್‌ ಅವರನ್ನು ನೇಮಕ ಮಾಡಿದ್ದು, ತಂಡ ಎರಡೂ ರಾಜ್ಯಗಳಿಗೆ ಭೇಟಿ ನೀಡಲಿದೆ. ವಾಸ್ತವ ಸ್ಥಿತಿ ಅಧ್ಯಯನ ನಡೆಸಿ, ಅ. 17ರಂದು ವರದಿ ನೀಡಲು ಸೂಚನೆ ನೀಡಿದೆ. ಅ. 18ಕ್ಕೆ ವಿಚಾರಣೆ ನಡೆಯಲಿದೆ.

ಜಿ.ಎಸ್‌. ಝಾ ನೇತೃತ್ವದದಲ್ಲಿ ತಾಂತ್ರಿಕ ಉನ್ನತಾಧಿಕಾರ ತಂಡ ರಚನೆಗೆ ಸುಪ್ರೀಂ ಅಸ್ತು ಎಂದಿದ್ದು, ತಾಂತ್ರಿಕ ಸಮಿತಿಯಲ್ಲಿ ನಾಲ್ಕು ರಾಜ್ಯಗಳ ಮುಖ್ಯ ಎಂಜಿಯರ್‌ಗಳು ಇರುತ್ತಾರೆ.

ಸೆ. 20 ಮತ್ತು 30ರಂದು ಆದೇಶದಲ್ಲಿ ನೀಡಿದ್ದ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಯನ್ನು ಸುಪ್ರೀಂ ಸಧ್ಯಕ್ಕೆ ತಡೆ ಹಿಡಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.