ಹೈದರಾಬಾದ್ (ಪಿಟಿಐ): ನಿವೃತ್ತ ಏರ್ ಚೀಫ್ ಮಾರ್ಷಲ್ ಡೆನಿಸ್ ಅಂಥೋನಿ ಲಾಫಾಂಟೇನ್ ಬುಧವಾರ ಹೃದಯಾಘಾತದಿಂದ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
1929ರಲ್ಲಿ ಚೆನ್ನೈನಲ್ಲಿ ಜನಿಸಿದ್ದರು. 1965 ಮತ್ತು 1971ರ ಭಾರತ ಪಾಕ್ ನಡುವಿನ ಯುದ್ಧದ ಸಂದರ್ಭದಲ್ಲಿ ಇವರು ಭಾರತೀಯ ವಾಯು ಪಡೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ನಿವೃತ್ತಿಯ ನಂತರ ಅವರು ಮೇಡಕ್ ಜಿಲ್ಲೆಯ ಬ್ರಹ್ಮನಪಲ್ಲಿ ಗ್ರಾಮದಲ್ಲಿ ನೆಲೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.