ADVERTISEMENT

`ನೀಟ್ ' ಪರೀಕ್ಷೆಯನ್ನು ರದ್ದುಪಡಿಸಿದ ಸುಪ್ರೀಂ

​ಪ್ರಜಾವಾಣಿ ವಾರ್ತೆ
Published 18 ಜುಲೈ 2013, 12:56 IST
Last Updated 18 ಜುಲೈ 2013, 12:56 IST

ನವದೆಹಲಿ (ಪಿಟಿಐ): ಭಾರತೀಯ ವೈದ್ಯಕೀಯ ಮಂಡಳಿಯ ಅಧಿಸೂಚನೆಯಂತೆ   ನಡೆಯುತ್ತಿದ್ದ ಅಖಿಲ ಭಾರತ ಮಟ್ಟದ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು (ನೀಟ್) ಸುಪ್ರೀಂಕೋರ್ಟ್ ಗುರುವಾರ ರದ್ದುಪಡಿಸಿದೆ.

ಆದರೆ ಈಗಾಗಲೆ ನೀಟ್ ಪರೀಕ್ಷಾ ವಿಧಾನದ ಮೂಲಕ ಸೀಟು ಗಳಿಸಿರುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗವುದಿಲ್ಲ ಎಂದು ಹೇಳಿರುವ ನ್ಯಾಯಾಲಯ ಇನ್ನು ಮುಂದೆ ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ನೀಟ್ ಪರೀಕ್ಷೆಯನ್ನು ನಡೆಸುವಂತಿಲ್ಲ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.