ADVERTISEMENT

ನೀತಿ ಆಯೋಗದ ಸಭೆ ಇಂದು

​ಪ್ರಜಾವಾಣಿ ವಾರ್ತೆ
Published 16 ಜೂನ್ 2018, 19:08 IST
Last Updated 16 ಜೂನ್ 2018, 19:08 IST
ನೀತಿ ಆಯೋಗದ ಸಭೆ ಇಂದು
ನೀತಿ ಆಯೋಗದ ಸಭೆ ಇಂದು   

ನವದೆಹಲಿ: ನೀತಿ ಆಯೋಗದ ನಾಲ್ಕನೇ ಸಭೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆಯಲಿದೆ.

ದಿನವಿಡಿ ನಡೆಯಲಿರುವ ಸಭೆಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್‌ ಗವರ್ನರ್‌, ಕೇಂದ್ರ ಸಚಿವರು ಮತ್ತು ತಜ್ಞರು ಭಾಗವಹಿಸಲಿದ್ದಾರೆ.

ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ತೆಗೆದುಕೊಳ್ಳಲಾದ ಕ್ರಮಗಳ ಕುರಿತು ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಗುವುದು.

ADVERTISEMENT

ಆಯುಷ್ಮಾನ್‌ ಭಾರತ, ರಾಷ್ಟ್ರೀಯ ಪೋಷಕಾಂಶ ಅಭಿಯಾನ, ಇಂದ್ರಧನುಷ್‌ನಂತಹ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳ ಅನುಷ್ಠಾನ ಕೂಡ ಚರ್ಚೆಗೆ ಬರಲಿವೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.