ನವದೆಹಲಿ (ಐಎಎನ್‌ಎಸ್): ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ 100 ರಹಸ್ಯ ಕಡತಗಳನ್ನು ಕೇಂದ್ರ ಸರ್ಕಾರ ಶನಿವಾರ ಬಿಡುಗಡೆ ಮಾಡಿದೆ.
ಬೋಸ್ ಅವರ 119ನೇ ಜನ್ಮದಿನದ ಅಂಗವಾಗಿ ಕಡತಗಳನ್ನು ಬಿಡುಗಡೆ ಮಾಡಲಾಗಿದೆ. ಬೋಸ್ ಅವರಿಗೆ ಸಂಬಂಧಿಸಿದ ಕಡತಗಳನ್ನು www.netajipapers.gov.in/ ಜಾಲತಾಣದಲ್ಲಿ ಬಿಡುಗಡೆ ಮಾಡಲಾಗಿದೆ.
ನ್ಯಾಷನಲ್ ಆರ್ಕೈವ್ಸ್ ಆಫ್ ಇಂಡಿಯಾ (ಎನ್‌ಎಐ) ಡಿಜಿಟಲ್ ರೂಪಕ್ಕೆ ತಂದಿರುವ 100 ಕಡತಗಳನ್ನು ಒಳಗೊಂಡ www.netajipapers.gov.in/ ಜಾಲತಾಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದರು.
ಮುಂದಿನ ದಿನಗಳಲ್ಲಿ ಪ್ರತಿ ತಿಂಗಳು 25 ಕಡತಗಳನ್ನು ಡಿಜಿಟಲ್ ರೂಪದಲ್ಲಿ ಈ ಜಾಲತಾಣದಲ್ಲಿ ಬಿಡುಗಡೆ ಮಾಡಲು ಎನ್‌ಎಐ ಉದ್ದೇಶಿಸಿದೆ.
ಕೇಂದ್ರ ಸರ್ಕಾರ ಬೋಸ್ ಅವರಿಗೆ ಸಂಬಂಧಿಸಿದ ಕಡತಗಳನ್ನು ಬಿಡುಗಡೆ ಮಾಡಿರುವುದನ್ನು ನೇತಾಜಿ ಕುಟುಂಬ ಸದಸ್ಯರು ಸ್ವಾಗತಿಸಿದ್ದಾರೆ.
ಬೇಡ ಎಂದಿದ್ದರು: ‘ನಾನು ಗೃಹ ಸಚಿವನಾಗಿದ್ದಾಗ ವೇಳೆ ಬೋಸ್ ಅವರಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸಬಾರದು ಎಂದು ಅವರ ಕುಟುಂಬ ಸದಸ್ಯರು ಒತ್ತಡ ಹೇರಿದ್ದರು’ ಎಂದು ಎಲ್.ಕೆ.ಅಡ್ವಾಣಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.