ADVERTISEMENT

ನೋಂದಣಿ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರದ ಚಿಂತನೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2013, 20:27 IST
Last Updated 3 ಜೂನ್ 2013, 20:27 IST

ನವದೆಹಲಿ (ಪಿಟಿಐ): ಶತಮಾನದಷ್ಟು ಹಳೆಯದಾದ ನೋಂದಣಿ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಮುಂದಾಗಿದೆ. ರೈತರ ಭೂಮಿಗೆ ಉತ್ತಮ ಬೆಲೆ ನೀಡುವುದು ಮತ್ತು ಅಧಿಕಾರ ಪತ್ರವನ್ನು (ಪವರ್ ಆಫ್ ಅಟಾರ್ನಿ) ಕಡ್ಡಾಯವಾಗಿ ನೋಂದಾಯಿಸುವುದು ಇದರ ಪ್ರಮುಖ ಉದ್ದೇಶ.

1908ರ ನೋಂದಣಿ ಕಾಯ್ದೆ ತಿದ್ದುಪಡಿ ಮಸೂದೆಯ ಬಗ್ಗೆ ಮಂಗಳವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಗಳಿವೆ.

ವಿವಿಧ ಯೋಜನೆಗಳಿಗೆ ರೈತರ ಜಮೀನನ್ನು ಸ್ವಾಧೀನಪಡಿಸಿಕೊಳ್ಳುವ ಸಂದರ್ಭದಲ್ಲಿ ಅವರಿಗೆ ಮಾರುಕಟ್ಟೆ ಬೆಲೆ ದೊರಕಿಸಿಕೊಡುವ ಉದ್ದೇಶದಿಂದ  ಕಾಯ್ದೆಗೆ ತಿದ್ದುಪಡಿ ತರಲು ಚಿಂತಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.