
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ತೀಕ್ಷ್ಣಮತಿಗೆ ಹೆಸರಾದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮಾರ್ಕಂಡೇಯ ಕಟ್ಜು ಸೋಮವಾರ ಸೇವೆಯಿಂದ ನಿವೃತ್ತರಾದರು.
ಸುಮಾರು ಐದೂವರೆ ವರ್ಷಗಳ ಕಾಲ ಸರ್ವೋಚ್ಚ ನ್ಯಾಯಾಲಯದಲ್ಲಿ ಅವರು ಸೇವೆ ಸಲ್ಲಿಸ್ದ್ದಿದಾರೆ. ಭಾರತೀಯ ಕಾನೂನು ಸಂಸ್ಥೆಯಲ್ಲಿ ಕಟ್ಜು ಅವರಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ನ್ಯಾಯಮೂರ್ತಿ ಎಸ್.ಎಚ್.ಕಪಾಡಿಯ ಹಾಗೂ ವಕೀಲರ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.