ADVERTISEMENT

ಪಕ್ಷದಲ್ಲಿ ಪ್ರಮುಖ ಪಾತ್ರ, ರಾಹುಲ್‌ಗೆ ಬಿಟ್ಟ ವಿಚಾರ: ಸೋನಿಯಾ ಗಾಂಧಿ

​ಪ್ರಜಾವಾಣಿ ವಾರ್ತೆ
Published 18 ಜುಲೈ 2012, 8:35 IST
Last Updated 18 ಜುಲೈ 2012, 8:35 IST
ಪಕ್ಷದಲ್ಲಿ ಪ್ರಮುಖ ಪಾತ್ರ, ರಾಹುಲ್‌ಗೆ ಬಿಟ್ಟ ವಿಚಾರ: ಸೋನಿಯಾ ಗಾಂಧಿ
ಪಕ್ಷದಲ್ಲಿ ಪ್ರಮುಖ ಪಾತ್ರ, ರಾಹುಲ್‌ಗೆ ಬಿಟ್ಟ ವಿಚಾರ: ಸೋನಿಯಾ ಗಾಂಧಿ   

ನವದೆಹಲಿ (ಪಿಟಿಐ): ಪಕ್ಷದಲ್ಲಿ ಪ್ರಮುಖ ಪಾತ್ರ ವಹಿಸುವ ಕುರಿತಂತೆ ನಿರ್ಧಾರ ಕೈಗೊಳ್ಳುವುದು ಸ್ವತಃ ರಾಹುಲ್ ಗಾಂಧಿಗೆ ಬಿಟ್ಟದ್ದು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಇಲ್ಲಿ ಸ್ಪಷ್ಟ ಪಡಿಸಿದರು.
 
ಉಪ ರಾಷ್ಟ್ರಪತಿ ಚುನಾವಣೆಗೆ ಎರಡನೇಯ ಅವಧಿಗಾಗಿ ಬುಧವಾರ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ಸಂಸತ್ ಭವನದಲ್ಲಿ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಹಾಜರಿದ್ದ ಸೋನಿಯಾ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತ `ಅವನ (ರಾಹುಲ್ ಗಾಂಧಿ) ಪರವಾಗಿ ಯಾರೊಬ್ಬರು ತೀರ್ಮಾನ ತೆಗೆದುಕೊಳ್ಳಲಾರರು. ಆತನೇ ನಿರ್ಧಾರ ತೆಗೆದುಕೊಳ್ಳುತ್ತಾನೆ~ ಎಂದು ಹೇಳಿದರು.

ಇತ್ತೀಚೆಗಷ್ಟೇ ಕಾಂಗ್ರೆಸ್‌ನ ಹಿರಿಯ ಮುಖಂಡರಾದ ದಿಗ್ವಿಜಯ ಸಿಂಗ್ ಹಾಗೂ ಸಲ್ಮಾನ್ ಖುರ್ಷಿದ್ ಅವರಿಂದ ಪಕ್ಷದಲ್ಲಿ ರಾಹುಲ್ ಅವರು ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ ಎಂಬ ಹೇಳಿಕೆಗಳು ಬಂದ ಹಿನ್ನೆಲೆಯಲ್ಲಿ ಸೋನಿಯಾ ಅವರು ಈ ರೀತಿ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.