ADVERTISEMENT

ಪಕ್ಷದ ಪ್ರಮುಖ ಸ್ಥಾನಗಳಿಗೆ ಅಡ್ವಾಣಿ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2013, 12:55 IST
Last Updated 10 ಜೂನ್ 2013, 12:55 IST
ಪಕ್ಷದ ಪ್ರಮುಖ ಸ್ಥಾನಗಳಿಗೆ ಅಡ್ವಾಣಿ ರಾಜೀನಾಮೆ
ಪಕ್ಷದ ಪ್ರಮುಖ ಸ್ಥಾನಗಳಿಗೆ ಅಡ್ವಾಣಿ ರಾಜೀನಾಮೆ   

ನವದೆಹಲಿ (ಪಿಟಿಐ): ಬಿಜೆಪಿಯ ಹಿರಿಯ ನಾಯಕ ಎಲ್. ಕೆ. ಅಡ್ವಾಣಿ ಪಕ್ಷದ ಪ್ರಮುಖ ಸ್ಥಾನಗಳಿಗೆ ಸೋಮವಾರ ರಾಜೀನಾಮೆ ನೀಡಿದ್ದಾರೆ.

ಸಂಸದೀಯ ಮಂಡಳಿಯ ಅಧ್ಯಕ್ಷ ಸ್ಥಾನ ಸೇರಿದಂತೆ ಪಕ್ಷದ ಪ್ರಮುಖ ಸ್ಥಾನಗಳಿಗೂ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ರವಾನಿಸಿದ್ದಾರೆ.

ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆಗಳು ಆಡ್ವಾಣಿ ಅವರಿಗೆ ಬೇಸರ ತರಿಸಿರುವುದರಿಂದ  ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ರಾಜೀನಾಮೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಡ್ವಾಣಿ ವೈಯಕ್ತಿಕ ಕಾರಣಗಳಿಗಾಗಿ ಪಕ್ಷದ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು ಇನ್ನು ಮುಂದೆ ಸಾಮಾನ್ಯ ಕಾರ್ಯಕರ್ತನಂತೆ ಪಕ್ಷಕ್ಕೆ ದುಡಿಯುವೆ ಎಂದು ಅಡ್ವಾಣಿ ಹೇಳಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದರಿಂದ ಅಸಮಾದಾನಗೊಂಡು ಅಡ್ವಾಣಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.