ADVERTISEMENT

ಪಕ್ಷ ಬಿಡಬೇಡಿ: ವರಿಷ್ಠರ ಮನವಿ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2012, 19:30 IST
Last Updated 6 ಮಾರ್ಚ್ 2012, 19:30 IST

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೂಕ್ತ ಸ್ಥಾನಮಾನ ನೀಡುವುದಾಗಿ ಭರವಸೆ ನೀಡಿರುವ ಬಿಜೆಪಿ ಹೈಕಮಾಂಡ್, ಪಕ್ಷ ತೊರೆಯುವ ಅಥವಾ ರಾಜಕೀಯದಿಂದ ನಿವೃತ್ತಿ ಹೊಂದುವ ದುಡುಕಿನ ತೀರ್ಮಾನ ಮಾಡದಂತೆ ಮನವಿ ಮಾಡಿದೆ.

ಸೋಮವಾರ ರಾಜಧಾನಿಗೆ ಆಗಮಿಸಿದ್ದ ಯಡಿಯೂರಪ್ಪ ಮಂಗಳವಾರ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದರು. `ಯಾವುದೇ ಆತುರದ ನಿರ್ಧಾರ ಮಾಡದೆ ತಾಳ್ಮೆಯಿಂದ ಇರಿ. ಪಕ್ಷ ನಿಮಗೆ ಸೂಕ್ತ ಸ್ಥಾನಮಾನ ನೀಡಲಿದೆ ಎಂದು ಯಡಿಯೂರಪ್ಪ ಅವರಿಗೆ ಸಲಹೆ ಮಾಡಿದ್ದೇನೆ~ ಎಂದು ಗಡ್ಕರಿ ಪತ್ರಕರ್ತರಿಗೆ ತಿಳಿಸಿದರು.

ಯಡಿಯೂರಪ್ಪ ಪಕ್ಷ ತೊರೆಯುವುದಿಲ್ಲ. ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ ಎಂದು ಬಿಜೆಪಿ ಅಧ್ಯಕ್ಷರು ಸ್ಪಷ್ಟಪಡಿಸಿದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.