ಸೇಲಂ (ಪಿಟಿಐ): ತಮಿಳುನಾಡಿನ ಮೆಟ್ಟೂರಿನ ಬಳಿ ಪಟಾಕಿ ಗೋಧಾಮಿಗೆ ಬೆಂಕಿ ತಗುಲಿದ ಪರಿಣಾಮ ಐವರು ಕಾರ್ಮಿಕರು ಸಜೀವ ದಹನಗೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಮೆಟ್ಟೂರು ಸಮೀಪದ ಪರಾಕಲ್ಲೂರು ಗ್ರಾಮದ ಬಳಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಐವರು ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಇನ್ನು ಹೆಚ್ಚುವ ಸಾಧ್ಯತೆಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಈ ಸಂಬಂಧ ತನಿಖೆ ನಡೆಸಲಾಗುವುದು ಎಂದು ಮೆಟ್ಟೂರಿನ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.