ADVERTISEMENT

ಪಠ್ಯಕ್ರಮ ಕಡಿತ ಅಳವಡಿಕೆ ರಾಜ್ಯದ ವಿವೇಚನೆಗೆ: ಕೇಂದ್ರ

ಪಿಟಿಐ
Published 19 ಮಾರ್ಚ್ 2018, 19:30 IST
Last Updated 19 ಮಾರ್ಚ್ 2018, 19:30 IST

ನವದೆಹಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತು (ಎನ್‌ಸಿಇಆರ್‌ಟಿ) ಮುಂದಿಟ್ಟಿರುವ ಶಾಲಾ ಪಠ್ಯಕ್ರಮವನ್ನು ಕಡಿತಗೊಳಿಸುವ ಪ್ರಸ್ತಾವವನ್ನು ‘ಅಳವಡಿಸಿಕೊಳ್ಳುವುದು ಅಥವಾ ಮಾರ್ಪಾಡು ಮಾಡಿಕೊಳ್ಳುವುದು’ ರಾಜ್ಯಗಳ ವಿವೇಚನೆಗೆ ಬಿಟ್ಟ ವಿಷಯ ಎಂದು ಮಾನವ ಸಂಪನ್ಮೂಲ ಸಚಿವಾಲಯ (ಎಚ್ಆರ್‌ಡಿ) ಹೇಳಿದೆ.

ಬಹುತೇಕ ಶಾಲೆಗಳು ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಬರುವುದರಿಂದ, ನಿರ್ಧಾರ ಆಯಾ ರಾಜ್ಯಗಳಿಗೆ ಸೇರಿದ್ದು ಎಂದು ಲೋಕಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆಯ ರಾಜ್ಯ ಸಚಿವ ಉಪೇಂದ್ರ ಕುಶ್ವಾಹಾ ತಿಳಿಸಿದ್ದಾರೆ.

ಪ್ರಸ್ತುತ ಪಠ್ಯಕ್ರಮ ಪರೀಕ್ಷೆಗಳಿಗೆ ಸೀಮಿತವಾಗಿರುವಂತೆ ಇದೆ. ಇದು ವಿದ್ಯಾರ್ಥಿಗಳನ್ನು ಪದಕೋಶಗಳ ಮಟ್ಟಕ್ಕೆ ಇಳಿಸುತ್ತಿದೆ ಎಂದು ಹೇಳಿದ್ದ ಎಚ್‌ಆರ್‌ಡಿ ಸಚಿವ ಪ್ರಕಾಶ್ ಜಾವಡೇಕರ್‌ ಅವರು, ಇನ್ನು ಎರಡು–ಮೂರು ವರ್ಷಗಳಲ್ಲಿ ಪಠ್ಯಕ್ರಮವನ್ನು ಅರ್ಧದಷ್ಟು ಕಡಿತಗೊಳಿಸಿ ದೈಹಿಕ ಶಿಕ್ಷಣ, ಜೀವನ ಕೌಶಲ
ಶಿಕ್ಷಣಗಳನ್ನು ಪಠ್ಯಕ್ಕೆ ಸೇರ್ಪಡೆಗೊಳಿಸಲಾಗುತ್ತದೆ ಎಂದಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.