ADVERTISEMENT

ಪತ್ರಕರ್ತನ ಹತ್ಯೆ: ತೇಜ್‌ ಪ್ರತಾಪ್‌ ವಿರುದ್ಧ ವಿಚಾರಣೆ ಮುಕ್ತಾಯ

ಪಿಟಿಐ
Published 22 ಮಾರ್ಚ್ 2018, 20:40 IST
Last Updated 22 ಮಾರ್ಚ್ 2018, 20:40 IST

ನವದೆಹಲಿ: ಸಿವಾನ್ ಮೂಲದ ಪತ್ರಕರ್ತ ರಜೆದೊ ರಂಜನ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಲಾಲುಪ್ರಸಾದ್‌ ಯಾದವ್‌ ಪುತ್ರ ತೇಜ್‌ ಪ್ರತಾಪ್‌ ವಿರುದ್ಧದ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಗುರುವಾರ ಮುಕ್ತಾಯಗೊಳಿಸಿ ಆದೇಶ ಹೊರಡಿಸಿದೆ.

ಆರ್‌ಜೆಡಿ ನಾಯಕನ ವಿರುದ್ಧ ದೋಷಾರೋಪಣೆ ಹೊರಿಸಲು ಸಿಬಿಐಗೆ ಯಾವುದೇ ಪುರಾವೆಗಳು ಲಭ್ಯವಾಗಿಲ್ಲ ಎಂದು ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಅಮನ್‌ ಲೆಖಿ ಸಲ್ಲಿಸಿದ ಹೇಳಿಕೆ ಆಧರಿಸಿ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಮತ್ತು ನ್ಯಾಯಮೂರ್ತಿ ಎ.ಎಂ. ಖನ್ವಿಲ್ಕರ್‌ ಹಾಗೂ ಡಿ.ವೈ ಚಂದ್ರಚೂಡ್‌ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿದೆ.

ಈ ಹತ್ಯೆಯ ಬಗ್ಗೆ ಮುಂದಿನ ದಿನಗಳಲ್ಲಿ ದೋಷಾರೋಪ ಹೊರಿಸುವ ಸಾಕ್ಷ್ಯಗಳು ಲಭ್ಯವಾದಲ್ಲಿ ಪೀಠವು ಪತ್ರಕರ್ತನ ಪತ್ನಿ ಸಲ್ಲಿಸಿದ ಅರ್ಜಿಯ ಮರು ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.