ಮುಂಬೈ (ಪಿಟಿಐ): ಪತ್ರಕರ್ತ ಜೆ.ಡೇ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬುಧವಾರ ಮೂವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮೂವರೂ ಪಾತಕಿಗಳು ಚೋಟಾ ಶಕೀಲ್ನ ಸಹಚರರು ಎಂದು ಶಂಕಿಸಲಾಗಿದೆ.
`ಡೇ ಹತ್ಯೆ ಪ್ರಕರಣ ಸಂಬಂಧ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣದಲ್ಲಿ ಅವರ ಪಾತ್ರದ ಕುರಿತಂತೆ ತನಿಖೆ ನಡೆಸುತ್ತಿದ್ದೇವೆ~ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಬಂಧಿತರು ದಾವೂದ್ ಇಬ್ರಾಹಿಂನ ಬಲಗೈ ಬಂಟ ಚೋಟಾ ಶಕೀಲ್ನ ಸಹಚರರು ಎಂದು ಶಂಕಿಸಲಾಗಿದ್ದು, ಅವರ ಚರಿತ್ರೆ ಪರಿಶೀಲಿಸಲಾಗುವುದು ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.