ADVERTISEMENT

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ : ಮರುಪರಿಶೀಲನಾ ಅರ್ಜಿ ಸಲ್ಲಿಸಲು ಕೇಂದ್ರ ಸರ್ಕಾರ ನಿರ್ಧಾರ

ಏಜೆನ್ಸೀಸ್
Published 30 ಮಾರ್ಚ್ 2018, 12:07 IST
Last Updated 30 ಮಾರ್ಚ್ 2018, 12:07 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ ಕುರಿತು ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪಿನ ವಿರುದ್ಧ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಕೇಂದ್ರ ಸಚಿವ ಥಾವರ್‌ಚಂದ್‌ ಗೆಹ್ಲೊಟ್‌ ಟ್ವಿಟರ್‌ ಮೂಲಕ ಈ ಕುರಿತು ಮಾಹಿತಿ ನೀಡಿದ್ದಾರೆ. ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ಸರ್ಕಾರ ಕಟಿಬದ್ಧವಾಗಿದೆ. ಕಾಯ್ದೆಯ ಕುರಿತು ನ್ಯಾಯಾಲಯ ನೀಡಿರುವ ಆದೇಶವನ್ನು ಮರು ಪರಿಶೀಲಿಸುವಂತೆ ಅರ್ಜಿ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT