ADVERTISEMENT

ಪರಿಹಾರ ಧನ ಪ್ರಕಟ

​ಪ್ರಜಾವಾಣಿ ವಾರ್ತೆ
Published 22 ಮೇ 2012, 19:30 IST
Last Updated 22 ಮೇ 2012, 19:30 IST

ನವದೆಹಲಿ/ಮಂಗಳೂರು:  ರೈಲು ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಸಂಬಂಧಿಕರಿಗೆ ರೂ 5 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ ರೂ 1 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲಾ ಗುವುದು ಎಂದು  ರೈಲ್ವೆ ಖಾತೆಯ ರಾಜ್ಯ ಸಚಿವ ಭರತ್‌ಸಿಂಗ್ ಸೋಲಂಕಿ ಮಂಗಳವಾರ ರಾಜ್ಯಸಭೆಗೆ ತಿಳಿಸಿದ್ದಾರೆ.

ದುರಂತದಲ್ಲಿ ಮೃತಪಟ್ಟವರ ಬಂಧುಗಳಿಗೆ ರಾಜ್ಯ ಸರ್ಕಾರ ತಲಾ ರೂ 1 ಲಕ್ಷ ಪರಿಹಾರ ನೀಡಲಿದೆ. ಗಾಯಗೊಂಡವರಿಗೆ ರೂ 25 ಸಾವಿರ  ಮತ್ತು ಚಿಕಿತ್ಸಾ ಸೌಲಭ್ಯ ಒದಗಿಸಲಿದೆ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.