ADVERTISEMENT

ಪರೀಕ್ಷೆಯಲ್ಲಿ ಅನುತ್ತೀರ್ಣ: ವಿದ್ಯಾರ್ಥಿನಿಯರಿಂದ ಪ್ರಾಂಶುಪಾಲರ ಒತ್ತೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2012, 19:59 IST
Last Updated 18 ಡಿಸೆಂಬರ್ 2012, 19:59 IST

ಕೋಲ್ಕತ್ತ (ಪಿಟಿಐ): ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿನಿಯರ ಗುಂಪೊಂದು ಫಲಿತಾಂಶದ ಪುನರ್‌ಪರಿಶೀಲನೆಗೆ ಒತ್ತಾಯಿಸಿ ಪ್ರಾಂಶುಪಾಲ ಮತ್ತು ಶಿಕ್ಷಕರನ್ನು ಒಂದು ದಿನ ಒತ್ತೆಯಾಗಿಟ್ಟುಕೊಂಡು, ಆನಂತರ ಬಿಡುಗಡೆಗೊಳಿಸಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

ಪರೀಕ್ಷಾ ಫಲಿತಾಂಶ ಕುರಿತು ತೀವ್ರ ಅಸಮಾಧಾನ ಹೊಂದಿದ್ದ `ರಿಶಿ ಅರಬಿಂದೊ ಬಾಲಿಕಾ ವಿದ್ಯಾಲಯ'ದ ಸುಮಾರು 29 ವಿದ್ಯಾರ್ಥಿನಿಯರು, ಸೋಮವಾರ ಮಧ್ಯಾಹ್ನದಿಂದ ಪ್ರಾಂಶುಪಾಲ ಮತ್ತು ಶಿಕ್ಷಕರನ್ನು ಒತ್ತೆ ಇಟ್ಟುಕೊಂಡಿದ್ದರು.


ಫಲಿತಾಂಶ ಕುರಿತು ಶೀಘ್ರ ಪುನರ್‌ಪರಿಶೀಲನೆ ನಡೆಸುವುದಾಗಿ ಪಶ್ಚಿಮ ಬಂಗಾಳ ಶಿಕ್ಷಣ ಇಲಾಖೆ ಅಧಿಕಾರಿಗಳು ಭರವಸೆ ನೀಡಿದ ನಂತರ ಮಂಗಳವಾರ ಮಧ್ಯಾಹ್ನ ಪ್ರಾಂಶುಪಾಲರು ಮತ್ತು ಶಿಕ್ಷಕರನ್ನು ಬಿಡುಗಡೆಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT