ಕೋಲ್ಕತ್ತ (ಐಎಎನ್‌ಎಸ್): ಪಶ್ಚಿಮ ಬಂಗಾಳ ವಿಧಾನ ಸಭೆಯ 50 ಕ್ಷೇತ್ರಗಳಿಗೆ ಶನಿವಾರ ನಡೆದ ಎರಡನೇ ಹಂತದ ಚುನಾವಣೆಯಲ್ಲಿ ಸುಮಾರು ಶೇಕಡಾ 80 ರಷ್ಟು ಮತದಾನವಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ದಿವ್ಯೇಂದು ಸರ್ಕಾರ್ ಅವರು ತಿಳಿಸಿದ್ದಾರೆ.
ಮೂರು ಜಿಲ್ಲೆಯ 50 ಕ್ಷೇತ್ರಗಳಿಗೆ ನಡೆದ ಚುನಾವಣೆ ಬಹುತೇಕ ಶಾಂತಿಯುತವಾಗಿದ್ದು, ಅಹಿತಕರ ಘಟನೆಗಳು ನಡೆದ ವರದಿಯಾಗಿಲ್ಲ. ಮತಗಟ್ಟೆಗಳ ಮುಂದೆ ಸಂಜೆ 5ರವರೆಗೆ ಜನರು ಸರದಿ ಸಾಲಿನಲ್ಲಿ ನಿಂತಿ ತಮ್ಮ ಹಕ್ಕನ್ನು ಚಲಾಯಿಸಿದರು ಎಂದು ಸರ್ಕಾರ್ ಹೇಳಿದ್ದಾರೆ. ಏ.18ರಂದು ಮೊದಲ ಹಂತದಲ್ಲಿ ನಡೆದ ಚುನಾವಣೆಯಲ್ಲಿ 84.11 ರಷ್ಟು ಮತದಾನವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.