ADVERTISEMENT

ಪಾಕ್‌ ರೋಗಿಗಳಿಗೆ ಭಾರತದ ವೀಸಾ

ಪಿಟಿಐ
Published 14 ಅಕ್ಟೋಬರ್ 2017, 19:30 IST
Last Updated 14 ಅಕ್ಟೋಬರ್ 2017, 19:30 IST

ನವದೆಹಲಿ: ಭಾರತದಲ್ಲಿ ಚಿಕಿತ್ಸೆ ಪಡೆಯಲು ಮುಂದಾದ ಪಾಕಿಸ್ತಾನದ ರೋಗಿಗಳಿಗೆ ವೀಸಾ ನೀಡುವುದಾಗಿ ಕೇಂದ್ರ ಸರ್ಕಾರ ಹೇಳಿದೆ. 

ಯಕೃತ್ತು, ಮೂತ್ರಪಿಂಡದಂತಹ ಅಂಗಾಂಗ ಕಸಿ ಅಗತ್ಯವಿರುವ ಮತ್ತು ಗಂಭೀರ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಪಾಕಿಸ್ತಾನದ ರೋಗಿಗಳ ಸಂಬಂಧಿಗಳು ಚಿಕಿತ್ಸೆಗಾಗಿ ವೀಸಾ ನೀಡುವಂತೆ ಟ್ವೀಟ್ಟರ್‌ ಮೂಲಕ ಭಾರತ ಸರ್ಕಾಕ್ಕೆ ಮನವಿ ಮಾಡಿಕೊಂಡಿದ್ದರು.

ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್‌, ವೀಸಾ ನೀಡುವಂತೆ ಇಸ್ಲಾಮಾಬಾದ್‌ನಲ್ಲಿರುವ ಭಾರತದ ಹೈಕಮಿಷನ್‌ ಕಚೇರಿಗೆ ತಿಳಿಸಿದ್ದಾರೆ. ಭಾರತ ಸರ್ಕಾರದ ಈ ನಿಲುವಿಗೆ ಪಾಕಿಸ್ತಾನಿಯರು ಕೃತಜ್ಞತೆ ಸಲ್ಲಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.