ADVERTISEMENT

ಪಾಲೆಂ ದುರಂತ: ಪರಿಹಾರ ಘೋಷಿಸಿದ ಆಂಧ್ರ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2013, 19:30 IST
Last Updated 5 ಡಿಸೆಂಬರ್ 2013, 19:30 IST

ಹೈದರಾಬಾದ್‌: ಪಾಲೆಂ ಬಸ್‌ ಅಪಘಾತ ಪ್ರಕರಣದಲ್ಲಿ ಮೃತ ಪಟ್ಟವರ ಕುಟುಂಬಕ್ಕೆ ಆಂಧ್ರಪ್ರದೇಶ ಸರ್ಕಾರ ತಲಾ ₨ 1 ಲಕ್ಷ ಪರಿಹಾರ ಘೋಷಿಸಿದೆ.

ಅಕ್ಟೋಬರ್‌ 30 ರಂದು ಬೆಂಗಳೂರಿ­ನಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಖಾಸಗಿ ವೋಲ್ವೊ ಬಸ್‌ ಮಹಬೂಬನಗರ ಜಿಲ್ಲೆಯ ಪಾಲೆಂ ಎಂಬಲ್ಲಿ ಬೆಂಕಿ ಅಪಘಾತಕ್ಕೆ ಒಳಗಾಗಿತ್ತು. ಅದರಲ್ಲಿ ಪ್ರಯಾಣಿಸುತ್ತಿದ್ದ 49 ಜನ ಸಜೀವ ದಹನರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.