ADVERTISEMENT

ಪಿಎಫ್-ಇಎಸ್‌ಐ ವೇತನ ಮಿತಿ ಏರಿಕೆ?

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2013, 19:59 IST
Last Updated 10 ಏಪ್ರಿಲ್ 2013, 19:59 IST

ಕೊಯಮತ್ತೂರು (ಪಿಟಿಐ): ಕಾರ್ಮಿಕರ ಆರೋಗ್ಯ ವಿಮೆ (ಇಎಸ್‌ಐ) ಮತ್ತು ಭವಿಷ್ಯ ನಿಧಿಗೆ (ಪಿಎಫ್) ನಿಗದಿ ಪಡಿಸಲಾದ ವೇತನ ಮಿತಿಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಗಂಭೀರವಾಗಿ ಯೋಚಿಸುತ್ತಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವ ಕೊಡಿಕುನ್ನಿಲ್ ಸುರೇಶ್ ತಿಳಿಸಿದ್ದಾರೆ.

ಕಾರ್ಮಿಕ ಸಂಘಟನೆಗಳ ಒತ್ತಾಯದ ಮೇರೆಗೆ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದ್ದು ಸದ್ಯದ ಪಿಎಫ್ ವೇತನ ಮಿತಿಯನ್ನು 6,500ರಿಂದ 15 ಸಾವಿರ ರೂಪಾಯಿಗೆ ಹಾಗೂ ಇಎಸ್‌ಐ ವೇತನ ಮಿತಿಯನ್ನು 15 ಸಾವಿರದಿಂದ 25 ಸಾವಿರ ರೂಪಾಯಿಗೆ ಹೆಚ್ಚಿಸುವ ನಿರ್ಧಾರವನ್ನು ಗಂಭೀರವಾಗಿ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅಸಂಘಟಿತ ಕಾರ್ಮಿಕರಿಗೆ ಕನಿಷ್ಠ 10 ಸಾವಿರ ರೂಪಾಯಿ ವೇತನ ನಿಗದಿಗೊಳಿಸುವ ಯೋಚನೆ ಕೇಂದ್ರದ ಮುಂದಿದ್ದು, ಶೀಘ್ರ ಸಚಿವ ಸಂಪುಟದ ಅನುಮೋದನೆಗೆ ಕಳಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.