ADVERTISEMENT

ಪುನರ್ ಪರಿಶೀಲನಾ ಅರ್ಜಿಗೆ ಡಿಎಂಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2012, 19:30 IST
Last Updated 1 ಅಕ್ಟೋಬರ್ 2012, 19:30 IST

ಚೆನ್ನೈ (ಪಿಟಿಐ): 2ಜಿ  ತರಂಗಾಂತರ ಹಂಚಿಕೆಗೆ ಸಂಬಂಧಿಸಿದಂತೆ 122 ದೂರಸಂಪರ್ಕ ಕಂಪೆನಿಗಳಿಗೆ ನೀಡಿದ್ದ ಪರವಾನಗಿ ರದ್ದುಪಡಿಸಿ  ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸುವಂತೆ ಸರ್ಕಾರವನ್ನು ಡಿಎಂಕೆ ಒತ್ತಾಯಿಸಿದೆ.

ಸುಪ್ರೀಂಕೋರ್ಟ್ ತೀರ್ಪಿನ ಬಳಿಕ 2ಜಿ ತರಂಗಾಂತರ ಹಂಚಿಕೆಗೆ ಸಂಬಂಧಿಸಿದ ಸಮಸ್ಯೆಗಳು ಮತ್ತಷ್ಟು ಹೆಚ್ಚಲಿರುವ ಹಿನ್ನೆಲೆಯಲ್ಲಿ ಪಕ್ಷವು ಈ ನಿರ್ಣಯ ತೆಗೆದುಕೊಂಡಿದೆ. 2ಜಿ ಹಗರಣದಲ್ಲಿ ಕರುಣಾನಿಧಿ ಪುತ್ರಿ ಕನಿಮೋಳಿ, ಮಾಜಿ ದೂರಸಂಪರ್ಕ ಸಚಿವ  ಎ. ರಾಜಾ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.