ADVERTISEMENT

ಪೃಥ್ವಿ -2 ಕ್ಷಿಪಣಿ ಪರೀಕ್ಷೆ ಯಶಸ್ವಿ

ಪಿಟಿಐ
Published 2 ಜೂನ್ 2017, 19:30 IST
Last Updated 2 ಜೂನ್ 2017, 19:30 IST
ಪೃಥ್ವಿ -2 ಕ್ಷಿಪಣಿ ಪರೀಕ್ಷೆ ಯಶಸ್ವಿ
ಪೃಥ್ವಿ -2 ಕ್ಷಿಪಣಿ ಪರೀಕ್ಷೆ ಯಶಸ್ವಿ   

ಬಾಲಸೋರ್‌ (ಒಡಿಶಾ) :  ಸ್ವದೇಶಿ ನಿರ್ಮಿತ ಪೃಥ್ವಿ– 2 ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಯನ್ನು ಶುಕ್ರವಾರ ಇಲ್ಲಿ ಯಶಸ್ವಿಯಾಗಿ ನಡೆಸಲಾಯಿತು.
ನೆಲದಿಂದ ನೆಲಕ್ಕೆ ಅಣ್ವಸ್ತ್ರ ಸಿಡಿತಲೆಗಳನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯದ ಕ್ಷಿಪಣಿಯನ್ನು ಬೆಳಿಗ್ಗೆ 9.50ಕ್ಕೆ ಚಾಂಡಿಪುರದ ಸಮಗ್ರ ಪರೀಕ್ಷಾ ವಲಯದಲ್ಲಿರುವ (ಐಟಿಆರ್) ಉಡಾ ವಣಾ ಸಂಕೀರ್ಣ 3ರಿಂದ ಪರೀಕ್ಷೆಗೆ ಒಳಪಡಿಸಲಾಯಿತು.

ನಿಖರವಾಗಿ ಗುರಿಯನ್ನು ತಲುಪಬಲ್ಲ  ಅತ್ಯಾಧುನಿಕ ತಂತ್ರಜ್ಞಾನವನ್ನು ಇದು ಹೊಂದಿದೆ. ಡಿಆರ್‌ಡಿಒ ವಿಜ್ಞಾನಿಗಳ ಮೇಲ್ವಿಚಾರಣೆಯಲ್ಲಿ ಪರೀಕ್ಷಾರ್ಥ ಉಡಾವಣೆ ನಡೆಯಿತು.

ಇಂಟಿಗ್ರೇಟೆಡ್‌ ಗೈಡೆಡ್‌ ಡೆವಲಪ್‌ಮೆಂಟ್‌ ಪ್ರೋಗ್ರಾಮ್‌ ಅಡಿ  ಡಿಆರ್‌ಡಿಒ ಅಭಿವೃದ್ಧಿಪಡಿಸಿರುವ ದ್ರವ ಇಂಧನದ ಮೊದಲ ಕ್ಷಿಪಣಿ ಇದಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.