ADVERTISEMENT

`ಪೃಥ್ವಿ-2' ಯಶಸ್ವಿ ಪರೀಕ್ಷಾರ್ಥ ಉಡಾವಣೆ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2012, 19:59 IST
Last Updated 20 ಡಿಸೆಂಬರ್ 2012, 19:59 IST

ಬಾಲಸೋರ್(ಒಡಿಶಾ)(ಪಿಟಿಐ):  ಅಣ್ವಸ್ತ್ರ ಸಿಡಿತಲೆ ಹೊತ್ತೊಯ್ಯಬಲ್ಲ ಸಾಮರ್ಥ್ಯದ `ಪೃಥ್ವಿ -2' ಕ್ಷಿಪಣಿಯನ್ನು ಸಮೀಪದ ಚಂಡೀಪುರ ಪರೀಕ್ಷಾ ಕೇಂದ್ರದಿಂದ ಬುಧವಾರ ಯಶಸ್ವಿಯಾಗಿ ಉಡಾಯಿಸಲಾಯಿತು.

ನೆಲದಿಂದ ನೆಲಕ್ಕೆ ಚಿಮ್ಮುವ ದೇಸೀಯವಾಗಿ ಅಭಿವೃದ್ಧಿಪಡಿಸಿದ ಈ ಕ್ಷಿಪಣಿಯನ್ನು ಬೆಳಿಗ್ಗೆ 9.21 ನಿಮಿಷಕ್ಕೆ ಸಂಚಾರಿ ಉಡಾವಣಾ ಉಪಕರಣ `ಸಾಲ್ವೊ' ನೆರವಿನಿಂದ ಪರೀಕ್ಷಾರ್ಥವಾಗಿ ಉಡಾಯಿಸಲಾಯಿತು ರಕ್ಷಣಾ ಮೂಲಗಳು ತಿಳಿಸಿವೆ.
 
350 ಕಿ.ಮೀ ದೂರ ಕ್ರಮಿಸುವ `ಪೃಥ್ವಿ-2' ಸಿಡಿತಲೆಯನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿದ್ದು, ಈಗಾಗಲೇ ಇದನ್ನು ಸೇನಾ ಪಡೆಗಳಿಗೆ ಹಸ್ತಾಂತರಿಸಲಾಗಿದೆ.
 
ರಕ್ಷಣಾ ಸೇವೆಗಳ ಸ್ಟ್ರಾಟರ್ಜಿಕ್ ಫೋರ್ಸ್ ಕಮಾಂಡ್ (ಎಸ್‌ಎಫ್‌ಸಿ) ನ ಕಾರ್ಯಚಟುವಟಿಕೆಯ ಭಾಗವಾಗಿ ಈ ಸುಸಜ್ಜಿತ ಸಿಡಿತಲೆಯ ಪರೀಕ್ಷಾರ್ಥವಾಗಿ ಯಶಸ್ವಿಯಾಗಿ ಉಡಾಯಿಸಲಾಗಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
 
ಇದೇ ಮೊದಲ ಬಾರಿಗೆ 500 ರಿಂದ 1000 ಕೆ.ಜಿ ತೂಕದ ಸಿಡಿತಲೆಗಳನ್ನು ಹೊತ್ತೊಯ್ಯುವಂತಹ ಕ್ಷಿಪಣಿಯನ್ನು ಭಾರತದ ಪ್ರತಿಷ್ಠಿತ `ಸಮಗ್ರ ಮಾರ್ಗಸೂಚಿ ಕ್ಷಿಪಣಿ ಅಭಿವೃದ್ಧಿ ಕಾರ್ಯಕ್ರಮದ (ಇಂಟಿಗ್ರೇಟೆಡ್ ಗೈಡೆಡ್ ಮಿಸೈಲ್ ಡೆವೆಲಪ್‌ಮೆಂಟ್ ಪ್ರೋಗ್ರಾಮ್) ಅಡಿ ಅಭಿವೃದ್ಧಿಪಡಿಸಲಾಗಿದೆ. ಪೃಥ್ವಿ -2 ರಕೊನೆಯ ಯಶಸ್ವಿ ಪರೀಕ್ಷಾರ್ಥ ಹಾರಾಟ ಇದೇ ತಿಂಗಳ ಅಕ್ಟೋಬರ್ 4 ರಂದು ಕೈಗೊಳ್ಳಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.