ADVERTISEMENT

ಪೆಟ್ರೋಲ್ ದರ ರೂ. 1 ಕಡಿತ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2013, 13:52 IST
Last Updated 15 ಏಪ್ರಿಲ್ 2013, 13:52 IST

ನವದೆಹಲಿ (ಪಿಟಿಐ): ಸರ್ಕಾರಿ ಸೌಮ್ಯದ ತೈಲ ಮಾರಾಟ ಕಂಪೆನಿಗಳು ಸೋಮವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ದರವನ್ನು ಲೀಟರ್‌ಗೆ ರೂ. 1 ಕಡಿತಗೊಳಿಸಿವೆ.

ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ದರದಲ್ಲಿ ಅಲ್ಪ ಮಟ್ಟದಲ್ಲಿ  ಕಡಿತಗೊಳ್ಳುತ್ತಿರುವುದು ಇದು ಮೂರನೇ ಬಾರಿಯಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಸಲ್ಪ ಮಟ್ಟದಲ್ಲಿ ಇಳಿಕೆಯಾಗಿರುವುದರಿಂದ ಪೆಟ್ರೋಲ್ ಲೀಟರ್ ದರದಲ್ಲಿ ರೂ. 1 ಕಡಿತಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.