ADVERTISEMENT

ಪೆರೋಲ್ ಕಾಯ್ದೆ ತಿದ್ದುಪಡಿಗೆ ಕೋರಿಕೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2012, 19:30 IST
Last Updated 19 ಜೂನ್ 2012, 19:30 IST

ನವದೆಹಲಿ (ಪಿಟಿಐ): ಪೆರೋಲ್ ಮೇಲೆ  ಬಿಡುಗಡೆ ಹೊಂದುತ್ತಿರುವ ಕೈದಿಗಳು ಜೈಲಿಗೆ ಹಿಂತಿರುಗದೇ ನಾಪತ್ತೆಯಾಗುತ್ತಿರುವ  ಹಿನ್ನೆಲೆಯಲ್ಲಿ ಪೆರೋಲ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕಾಯ್ದೆಯನ್ನು ಇನ್ನಷ್ಟು ಕಠಿಣಗೊಳಿಸಬೇಕು ಎಂದು ತಿಹಾರ್ ಜೈಲಿನ ಅಧಿಕಾರಿಗಳು ದೆಹಲಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಪೆರೋಲ್‌ಮೇಲೆ ಬಿಡುಗಡೆ ಹೊಂದಿದ 67 ಮಂದಿ ಕೈದಿಗಳು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ಪ್ರಸ್ತುತ 11,988 ಕೈದಿಗಳು ತಿಹಾರ್‌ನ ಒಂಬತ್ತು ಜೈಲುಗಳಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.