ನವದೆಹಲಿ (ಐಎಎನ್ಎಸ್): ಮಾಜಿ ಗಗನಸಖಿ ಗೀತಿಕಾ ಶರ್ಮಾ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಹರಿಯಾಣದ ಮಾಜಿ ಸಚಿವ ಗೋಪಾಲ್ ಗೋಯಲ್ ಕಾಂಡಾ ಅವರು ಶನಿವಾರ ಮುಂಜಾನೆ ಶರಣಾಗಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಶನಿವಾರ ಮಧ್ಯಾಹ್ನ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.
ಗುರುವಾರವಷ್ಟೆ ಮಾಜಿ ಸಚಿವ ಗೋಪಾಲ್ ಗೋಯಲ್ ಕಾಂಡಾ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು.
ಮಾಜಿ ಗಗನಸಖಿ ಗೀತಿಕಾಶರ್ಮಾ ಅವರ ಆತ್ಮಹತ್ಯೆಗೆ ಕಾಂಡಾ ಅವರು ನೀಡುತ್ತಿದ್ದ ಮಾನಸಿಕ ಕಿರುಕುಳವೇ ಕಾರಣ ಎಂದು ಆರೋಪಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.