ADVERTISEMENT

ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಜನವರಿ 2011, 18:30 IST
Last Updated 19 ಜನವರಿ 2011, 18:30 IST

ಲಖನೌ (ಪಿಟಿಐ): ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತ ವಯಸ್ಸಿನ ದಲಿತ ಯುವತಿಯ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಆಕೆಯನ್ನು ಜೈಲಿಗೆ ಹಾಕಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ (ಎನ್‌ಸಿಎಸ್‌ಸಿ)ದ ಅಧ್ಯಕ್ಷ ಪಿ.ಎಲ್. ಪುನಿಯಾ ಒತ್ತಾಯಿಸಿದ್ದಾರೆ.

‘ಬಾಲಕಿಯ ಮೇಲೆ ಅತ್ಯಾಚಾರ ಎಸಗಿದವರ ವಿರುದ್ಧ ದೂರು ದಾಖಲಿಸಿಕೊಂಡ ಮೇಲೂ ಆಕೆ ವಿರುದ್ಧ ಸುಳ್ಳು ಆಪಾದನೆ ಹೊರಿಸಿ ಜೈಲಿಗೆ ಹಾಕಿದ ಬಾಂದ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಅವರ ಅಧೀನ ಅಧಿಕಾರಿಗಳ ಮೇಲೆ ಮೊದಲು ಪ್ರಕರಣ ದಾಖಲು ಮಾಡಿಕೊಳ್ಳಬೇಕು’ ಎಂದು ಹೇಳಿದ್ದಾರೆ.

ಉಪವಾಸ ಸತ್ಯಾಗ್ರಹ ಬೆದರಿಕೆ: ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತ ವಯಸ್ಸಿನ ದಲಿತ ಯುವತಿಯು ತನ್ನ ಮನೆಯನ್ನು ಪೊಲೀಸರು ಸುತ್ತುವರಿದಿದ್ದು, ಗೃಹ ಬಂಧನದಲ್ಲಿ ಇಟ್ಟಿದ್ದಾರೆ. ಆದ್ದರಿಂದ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಬೆದರಿಕೆ ಹಾಕಿದ್ದ ಆಕೆ ನಂತರ ತನ್ನ ನಿಲುವಿನಿಂದ ಹಿಂದೆ ಸರಿದಿದ್ದಾಳೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.