ADVERTISEMENT

ಪ್ರತಿ ಜಿಲ್ಲೆಯಲ್ಲಿಯೂ ಸದ್ಭಾವನಾ ಉಪವಾಸ: ನರೇಂದ್ರ ಮೋದಿ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2011, 19:30 IST
Last Updated 6 ಅಕ್ಟೋಬರ್ 2011, 19:30 IST

ಅಹಮದಾಬಾದ್ (ಪಿಟಿಐ): ಸದ್ಭಾವನಾ ಉಪವಾಸಕ್ಕೆ ದೊರೆತ ವ್ಯಾಪಕ ಬೆಂಬಲದಿಂದ ಉತ್ತೇಜಿತರಾಗಿರುವ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಒಂದು ದಿನದ ಉಪವಾಸ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಿದ್ದಾರೆ.

ಈ ಕಾರ್ಯಕ್ರಮ ದ್ವಾರಕಾದಲ್ಲಿ ಅ.16ರಂದು ಆರಂಭವಾಗಲಿದೆ ಎಂದು ಮುಖ್ಯಮಂತ್ರಿಗಳ ವಕ್ತಾರ ಜಯನಾರಾಯಣ ವ್ಯಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.