ನವದೆಹಲಿ (ಪಿಟಿಐ): ಮಹಿಳೆಯರ ಸುರಕ್ಷತೆ ಗಮನದಲ್ಲಿಟ್ಟುಕೊಂಡು ರೈಲ್ವೆ ರಕ್ಷಣಾ ಪಡೆಯಲ್ಲಿ ಪ್ರತ್ಯೇಕ ಮಹಿಳಾ ವಿಭಾಗವನ್ನು ರಚಿಸಲು ರೈಲ್ವೆ ಇಲಾಖೆ ಚಿಂತನೆ ನಡೆಸಿದೆ.
‘ಮಹಿಳೆಯರ ರಕ್ಷಣೆಗಾಗಿ ಆರ್ಪಿಎಫ್ನಲ್ಲಿ ‘ಮಹಿಳಾ ವಾಹಿನಿ ದಳ’ ಆರಂಭಿಸಿ, ಮಹಿಳಾ ಪ್ಲಾಟ್ಫಾರಂ ನಲ್ಲಿ ನಿಯೋಜಿಸಲಿದ್ದೇವೆ. ಈ ಬಗ್ಗೆ ಪ್ರಸ್ತಾಪವನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ’ ಎಂದು ರೈಲ್ವೆ ಸಚಿವ ಸುರೇಶ್ ಪ್ರಭು, ಭಟಿಂಡದಲ್ಲಿ ಹೊಸ ಶತಾಬ್ದಿ ಎಕ್ಸ್ಪ್ರೆಸ್ಗೆ ಚಾಲನೆ ನೀಡಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.