ADVERTISEMENT

ಪ್ರಧಾನಿ ಸಲಹೆಗಾರ ನಾಯರ್‌ಗೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 18 ಜೂನ್ 2013, 19:59 IST
Last Updated 18 ಜೂನ್ 2013, 19:59 IST

ನವದೆಹಲಿ (ಪಿಟಿಐ): ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಶೀಘ್ರದಲ್ಲಿಯೇ ಪ್ರಧಾನಿ ಮನಮೋಹನ್ ಸಿಂಗ್ ಅವರ ಸಲಹೆಗಾರ ಟಿ. ಕೆ. ಎ. ನಾಯರ್ ಅವರನ್ನು ಕರೆಸಲಾಗುವುದು ಎಂದು ಸಿಬಿಐ ಮೂಲಗಳು ತಿಳಿಸಿವೆ.

ಈ ಹಗರಣದ ಆಪಾದಿತ ಕಲ್ಲಿದ್ದಲು ಖಾತೆಯ ಮಾಜಿ ಕಾರ್ಯದರ್ಶಿ ಎಚ್. ಸಿ. ಗುಪ್ತಾ ಅವರಿಗೆ ಹಾಜರಾಗುವಂತೆ ಸಿಬಿಐ ನೋಟಿಸ್ ನೀಡಿದೆ.2006-2009ರ ವರೆಗೆ ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿ ನಡೆದ ಅಕ್ರಮಗಳ ಬಗ್ಗೆ ಸಾಕ್ಷಿ ನೀಡುವಂತೆ ನಾಯರ್ ಅವರಿಗೆ ಸೂಚಿಸಲಾಗುತ್ತದೆ.

ಪ್ರಧಾನಿ ಕಾರ್ಯಾಲಯದ ಇಬ್ಬರು ಮಾಜಿ ಅಧಿಕಾರಿಗಳಾದ ವಿನಿ ಮಹಾಜನ್ ಮತ್ತು ಆಶಿಶ್ ಗುಪ್ತಾ ಅವರ ಹೇಳಿಕೆಗಳನ್ನು ಸಿಬಿಐ ಈಗಾಗಲೇ ದಾಖಲಿಸಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT