ADVERTISEMENT

ಪ್ರಧಾನಿ, ಸೋನಿಯಾಗಾಂಧಿ ಸಾರ್ವಜನಿಕ ಚರ್ಚೆಗೆ ಬರಲಿ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2012, 8:55 IST
Last Updated 21 ಅಕ್ಟೋಬರ್ 2012, 8:55 IST

ನವದೆಹಲಿ (ಪಿಟಿಐ): ರಾಬರ್ಟ್ ವಾದ್ರಾ ಅವರ ಅಕ್ರಮ ಭೂಹಗರಣಕ್ಕೆ ಸಂಬಂಧಿಸಿದಂತೆ ನಮ್ಮ ಪ್ರಶ್ನೆಗಳಿಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಧಾನಿ ಮನಮೋಹನ್ ಸಿಂಗ್ ಸಾರ್ವಜನಿಕವಾಗಿ ಉತ್ತರಿಸಲಿ ಎಂದು ಭ್ರಷ್ಟಾಚಾರ ವಿರೋಧ ಭಾರತದ (ಐಎಸಿ) ವರಿಷ್ಠ ಅರವಿಂದ್ ಕೇಜ್ರಿವಾಲ್ ಸವಾಲು ಹಾಕಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ್‌ಸಿಂಗ್ ` ಕೇಜ್ರಿವಾಲ್ ಅವರು ತಮ್ಮ  ಸರ್ಕಾರೇತರ ಸಂಸ್ಥೆಯಲ್ಲಿ ನಡೆಸಿರುವ ಅವ್ಯವಹಾರವನ್ನು ಮುಚ್ಚಿ ಹಾಕಲು ಬೇರೆಯವರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂಬ ಪ್ರತಿಕ್ರಿಯೆಗೆ ಕೇಜ್ರಿವಾಲ್ ಈ ಸವಾಲು ಹಾಕಿದ್ದಾರೆ.
 
ರಾಬರ್ಟ್ ವಾದ್ರಾ, ಸೋನಿಯಾ ಗಾಂಧಿ, ಪ್ರಧಾನಿಯವರಿಗೆ ಸಾರ್ವಜನಿಕವಾಗಿ ಕೆಲವು ಪ್ರಶ್ನೆಗಳನ್ನು ಕೇಳುತ್ತೆವೆ  ಆ ಪ್ರಶ್ನೆಗಳಿಗೆ ಮೊದಲು ಉತ್ತರ ಕೊಡಲಿ, ನಂತರ ನಾವು ದಿಗ್ವಿಜಯ್ ಸಿಂಗ್ ಕೇಳುವ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸುತ್ತೆವೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಈ ಪ್ರಕರಣದ ಸಂಬಂಧ ಸಾರ್ವಜನಿಕವಾಗಿ ಚರ್ಚೆ ಮಾಡಲು ಪ್ರಧಾನಿ ಮತ್ತು ಸೋನಿಯಾ ಗಾಂಧಿ ಅವರನ್ನು ಕರೆತರುವಂತೆ ದಿಗ್ವಿಜಯ್ ಸಿಂಗ್ ಅವರಲ್ಲಿ ಕೇಜ್ರಿವಾಲ್  ಮನವಿ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.