ನವದೆಹಲಿ: ಚುನಾವಣಾ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳು ದೇಶದ ಒಳಗಡೆ ಮತ್ತು ವಿದೇಶಕ್ಕೆ ಮಾಡಿದ ಪ್ರಯಾಣಕ್ಕಾಗಿ ಚುನಾವಣಾ ಆಯೋಗವು ₨5.83 ಕೋಟಿ ವೆಚ್ಚಮಾಡಿದೆ. ಮಾಜಿ ಚುನಾವಣಾ ಆಯುಕ್ತ ಎಸ್.ವೈ. ಖುರೇಷಿ ಅವರು ಅತಿ ಹೆಚ್ಚು ಅಂದರೆ 23 ಬಾರಿ ವಿದೇಶ ಪ್ರಯಾಣ ಮಾಡಿದ್ದಾರೆ.
ಆರ್ಟಿಐ ಅಡಿಯಲ್ಲಿ ಸಾಮಾಜಿಕ ಕಾರ್ಯಕರ್ತ ಸುಭಾಷ್ ಅಗರ್ವಾಲ್ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗ ಈ ಮಾಹಿತಿಗಳನ್ನು ನೀಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.