ADVERTISEMENT

ಪ್ರವೇಶ ಪರೀಕ್ಷೆ ಎನ್‌ಟಿಎ ತೆಕ್ಕೆಗೆ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2018, 19:30 IST
Last Updated 27 ಮಾರ್ಚ್ 2018, 19:30 IST

ನವದೆಹಲಿ: ಎನ್‌ಇಇಟಿ, ಜೆಇಇ ಸೇರಿದಂತೆ ವಿವಿಧ ಪ್ರವೇಶ ಪರೀಕ್ಷೆಗಳನ್ನು 2019ರಿಂದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ನಡೆಸಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಸದ್ಯ ಕೇಂದ್ರ ಪ್ರೌಢಶಿಕ್ಷಣ ಮಂಡಳಿ(ಸಿಬಿಎಸ್‌ಇ) ಈ ಪರೀಕ್ಷೆಗಳನ್ನು ನಡೆಸುತ್ತಿದೆ.

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್‌ ಜಾವಡೇಕರ್‌ ಅವರು ಸೋಮವಾರ ಲೋಕಸಭೆಯಲ್ಲಿ ನೀಡಿರುವ ಲಿಖಿತ ಉತ್ತರದಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT