ADVERTISEMENT

ಫಲಾನುಭವಿಗಳ ಖಾತೆಗೆ ಹಣ: ದೂರು ಸಲ್ಲಿಸುವ ಬೆದರಿಕೆ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2012, 20:44 IST
Last Updated 1 ಡಿಸೆಂಬರ್ 2012, 20:44 IST

ನವದೆಹಲಿ (ಪಿಟಿಐ): ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡುವ ಯುಪಿಎ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಬಿಜೆಪಿ, ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಬೆನ್ನಲ್ಲೇ ಜನತಾ ಪಕ್ಷದ ಅಧ್ಯಕ್ಷ ಸುಬ್ರಮಣಿಯನ್ ಸ್ವಾಮಿ ಅವರು
ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುವ ಬೆದರಿಕೆ ಹಾಕಿದ್ದಾರೆ.

ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಸರ್ಕಾರದ ನಿರ್ಧಾರದಲ್ಲಿ ಹಗರಣ ನಡೆದಿರುವ ಶಂಕೆ ಮೂಡಿದ್ದು, ಇದೊಂದು ಸಂವಿಧಾನಬಾಹಿರ ಕ್ರಮ ಎಂದು ತಿಳಿಸಿದ್ದಾರೆ. ಈ ಸಂವಿಧಾನಬಾಹಿರ ಕ್ರಮವನ್ನು ಸಂಸತ್ತಿನಲ್ಲಿ ಪ್ರಶ್ನಿಸಲಾಗುತ್ತದೆ ಎಂದು ಬಿಜೆಪಿ ತಿಳಿಸಿದೆ. ಅಲ್ಲಿ ಯಾವುದೇ ನಿರ್ಣಯ ಅಂಗೀಕಾರವಾಗದಿದ್ದರೆ ತಾವು ನ್ಯಾಯಾಲಯದಲ್ಲಿ ಸರ್ಕಾರದ ಕ್ರಮವನ್ನು ಪ್ರಶ್ನಿಸುವುದಾಗಿ ಸ್ವಾಮಿ ತಿಳಿಸಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಹೇಳಿದ್ದಾರೆ.
ಅರವಿಂದ್ ಕ್ರೇಜಿವಾಲ್ ಅವರ `ಆಮ್ ಆದ್ಮಿ ಪಕ್ಷ'ದ ಬಗ್ಗೆ ಪ್ರಸ್ತಾಪ ಮಾಡಿದ ಅವರು, ತಮ್ಮ ಪಕ್ಷ ಮಾತ್ರ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದು, ಇತರ ಪಕ್ಷಗಳು ಬರೀ ಹೇಳಿಕೆಗಳನ್ನು ನೀಡುತ್ತವೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.