ನವದೆಹಲಿ (ಪಿಟಿಐ): ಐದು ರಾಜ್ಯಗಳ ಚುನಾವಣಾ ಫಲಿತಾಂಶದಿಂದ ಯುಪಿಎ ಸರ್ಕಾರಕ್ಕೆ ಯಾವುದೇ ರೀತಿಯ `ಧಕ್ಕೆ~ಯಾಗದು ಎಂದಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಭ್ಯರ್ಥಿಗಳ ಆಯ್ಕೆಯಲ್ಲಿನ ತಪ್ಪು ನಿರ್ಧಾರ ಹಾಗೂ ಸಂಘಟನೆಯ ಕೊರತೆಯಿಂದಾಗಿ ಉತ್ತರ ಪ್ರದೇಶದಲ್ಲಿ ಪಕ್ಷಕ್ಕೆ ನಿರಾಶಾದಾಯಕ ಫಲಿತಾಂಶ ಬಂದಿದೆ ಎಂದು ಹೇಳಿದರು.
ಪಕ್ಷದ ಪ್ರಧಾನ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆ ಸಹ ಪಕ್ಷದ ಕಳಪೆ ಫಲಿತಾಂಶಕ್ಕೆ ಕಾರಣವಾಗಿದ್ದು, ಮುಂಬರುವ ಗುಜರಾತ್, ಹಿಮಾಚಲ ಪ್ರದೇಶ ಹಾಗೂ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಪಕ್ಷ ಭರದ ಸಿದ್ದತೆ ನಡೆಸಬೇಕು ಎಂದು ತಿಳಿಸಿದರು.
`ಗೆಲ್ಲಲ್ಲಿ, ಇಲ್ಲವೇ ಸೋಲಲಿ ಪ್ರತಿ ಚುನಾವಣೆ ನಮಗೊಂದು ಪಾಠ~ ಎಂದ ಸೋನಿಯಾ ಅವರು, ~ಕಳಪೆ ಫಲಿತಾಂಶಕ್ಕೆ ಸಂಬಂಧಿಸಿದಂತೆ ಎಲ್ಲ ರಾಜ್ಯಗಳ ಮುಖಂಡರ ಸಭೆ ಕರೆದು ಸೋಲಿನ ಕಾರಣದ ವಿಶ್ಲೇಷಣೆ ಮಾಡಲಾಗುವುದು~ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.