ADVERTISEMENT

ಫಲಿತಾಂಶ ಸುಧಾರಣೆ ಕಾರ್ಯಾಗಾರ11

​ಪ್ರಜಾವಾಣಿ ವಾರ್ತೆ
Published 21 ಜನವರಿ 2011, 7:55 IST
Last Updated 21 ಜನವರಿ 2011, 7:55 IST

ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಉತ್ತಮ ಪಡಿಸುವ ಸಲುವಾಗಿ ತಾಲ್ಲೂಕಿನ ಇರಕಲ್ಲಗಡ ಗ್ರಾಮದ ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ವಿದ್ಯಾರ್ಥಿಗಳಿಗಾಗಿ ಕಾರ್ಯಾಗಾರ ಆಯೋಜಿಸಲಾಗಿತ್ತು.

ಕಾರ್ಯಾಗಾರ ಉದ್ಘಾಟನೆ ನೆರವೇರಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಪೂಜಾರ, ಸತತ ಅಧ್ಯಯನ, ಓದಿದ್ದನ್ನು ಬರೆಯುವುದು ಹಾಗೂ ಗುಂಪು ಚರ್ಚೆಗಳ ಮೂಲಕ ಪುನರಾವರ್ತನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಭವಿಷ್ಯದ ಬದುಕು ಉತ್ತಮಗೊಳ್ಳಬೇಕು ಎಂದು ಈಗಿನ ವಿದ್ಯಾರ್ಥಿ ಜೀವನವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.