ADVERTISEMENT

ಫೇಸ್‌ಬುಕ್‌ನಲ್ಲಿ ಯೋಗಿ ಆದಿತ್ಯನಾಥ ಅತಿ ಹೆಚ್ಚು ಜನಪ್ರಿಯ ಮುಖ್ಯಮಂತ್ರಿ

ಪಿಟಿಐ
Published 20 ಏಪ್ರಿಲ್ 2018, 19:30 IST
Last Updated 20 ಏಪ್ರಿಲ್ 2018, 19:30 IST
ಯೋಗಿ ಆದಿತ್ಯನಾಥ (ಸಂಗ್ರಹ ಚಿತ್ರ)
ಯೋಗಿ ಆದಿತ್ಯನಾಥ (ಸಂಗ್ರಹ ಚಿತ್ರ)   

ಲಖನೌ: ಫೇಸ್‌ಬುಕ್‌ ಸಾಮಾಜಿಕ ಜಾಲತಾಣದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ದೇಶದ ಇತರ ಮುಖ್ಯಮಂತ್ರಿಗಳಿಗಿಂತ ಹೆಚ್ಚು ಜನಪ್ರಿಯವಾಗಿದ್ದಾರೆ.

ಈ ಕುರಿತು ಫೇಸ್‌ಬುಕ್‌ ಬಿಡುಗಡೆಗೊಳಿಸಿರುವ ಕ್ರಮಾಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದು, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಮತ್ತು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಅವರು ನಂತರದ ಸ್ಥಾನಗಳಲ್ಲಿದ್ದಾರೆ.

‘ಭಾರತದ ಜನಪ್ರಿಯ ಸರ್ಕಾರಿ ಇಲಾಖೆಗಳು, ಸಚಿವಾಲಯಗಳು ಮತ್ತು ರಾಜಕೀಯ ಪಕ್ಷಗಳ ಫೇಸ್‌ಬುಕ್‌ ಪುಟಗಳ ಕ್ರಮಾಂಕ ಬಿಡುಗಡೆ ಮಾಡಿದ್ದೇವೆ. 2017ರ ಜನವರಿ 1ರಿಂದ ಡಿಸೆಂಬರ್‌ 31ರವರೆಗಿನ ಅವಧಿಯಲ್ಲಿ ಆಯಾ ಪುಟಗಳಲ್ಲಿ ನಡೆದ ಸಂವಹನ, ಶೇರ್‌ಗಳು ಮತ್ತು ಕಾಮೆಂಟ್‌ಗಳನ್ನು ಆಧರಿಸಿ ಈ ಕ್ರಮಾಂಕ ಸಿದ್ಧಪಡಿಸಲಾಗಿದೆ’ ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಫೇಸ್‌ಬುಕ್‌ ಕಳುಹಿಸಿರುವ ಪತ್ರದಲ್ಲಿ ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.