ADVERTISEMENT

ಫೇಸ್‌ಬುಕ್: ವಿವರಣೆ ಕೇಳಿದ ಸುಪ್ರೀಂಕೋರ್ಟ್

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2012, 20:33 IST
Last Updated 30 ನವೆಂಬರ್ 2012, 20:33 IST
ಫೇಸ್‌ಬುಕ್: ವಿವರಣೆ ಕೇಳಿದ ಸುಪ್ರೀಂಕೋರ್ಟ್
ಫೇಸ್‌ಬುಕ್: ವಿವರಣೆ ಕೇಳಿದ ಸುಪ್ರೀಂಕೋರ್ಟ್   

ನವದೆಹಲಿ (ಪಿಟಿಐ): ಮುಂಬೈ ಬಂದ್ ವಿರುದ್ಧ ಫೇಸ್‌ಬುಕ್‌ನಲ್ಲಿ ಅಭಿಪ್ರಾಯ ಮಂಡಿಸಿದ ಇಬ್ಬರು ಯುವತಿಯರ ಬಂಧನ ಪ್ರಕರಣ ಕುರಿತು ವಿವರಣೆ ನೀಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿದೆ.

`ಈ ಯುವತಿಯರ ಬಂಧನಕ್ಕೆ ಕಾರಣವಾದ ಸನ್ನಿವೇಶದ ಯಾವುದು' ಎಂದು ಮುಖ್ಯ ನ್ಯಾಯಮೂರ್ತಿ ಅಲ್ತಮಸ್ ಕಬೀರ್ ಮತ್ತು ನ್ಯಾಯಮೂರ್ತಿ ಜೆ. ಚೆಲ್ಮೇಶ್ವರ್ ಅವರನ್ನು ಒಳಗೊಂಡ ನ್ಯಾಯಪೀಠ ಮಹಾರಾಷ್ಟ್ರ ಸರ್ಕಾರವನ್ನು ಕೇಳಿದೆ.

ಫೇಸ್‌ಬುಕ್ ಪ್ರಕರಣ ಕುರಿತು ದೆಹಲಿಯ ವಿದ್ಯಾರ್ಥಿನಿ ಶ್ರೇಯಾ ಸಿಂಘಾಲ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಮೂರ್ತಿಗಳು ಮಹಾರಾಷ್ಟ್ರ ಸರ್ಕಾರಕ್ಕೆ  ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ನಿರ್ದೇಶನ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.