ನವದೆಹಲಿ: ದೆಹಲಿಯಲ್ಲಿ ನಾಳೆ ನಡೆಯುವ ಗಣರಾಜ್ಯೋತ್ಸವದಲ್ಲಿ ಭಾಗವಹಿಸುವುದು ಸೇರಿದಂತೆ ಪ್ರಮುಖ ಒಡಂಬಡಿಕೆಗಳ ನಿಮಿತ್ತ ಭಾರತಕ್ಕೆ ಆಗಮಿಸಿರುವ ಫ್ರಾನ್ಸ್ ಅಧ್ಯಕ್ಷ ಫ್ರಾಂಸ್ವಾ ಒಲಾಂಡ್ ಅವರಿಗೆ ಸೋಮವಾರ ರಾಷ್ಟ್ರತಿ ಭವನದಲ್ಲಿ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು.
ರಾಷ್ಟ್ರಪತಿ ಪ್ರಣವ್ ಮುಖರ್ಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಒಲಾಂಡ್ ಅವರಿಗೆ ಹಸ್ತಲಾಘವ ಮಾಡುವ ಮೂಲಕ ಸ್ವಾಗತಿಸಿದರು.
ಬಳಿಕ ಒಲಾಂಡ್ ಅವರಿಗೆ ಸೇನಾ ಗೌರವ ವಂದನೆ ಸಲ್ಲಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.