ADVERTISEMENT

ಬಂಗಾರು ಲಕ್ಷ್ಮಣ್‌ಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2012, 19:30 IST
Last Updated 11 ಅಕ್ಟೋಬರ್ 2012, 19:30 IST

ನವದೆಹಲಿ (ಪಿಟಿಐ): ರಕ್ಷಣಾ ಸಾಮಗ್ರಿ ಖರೀದಿ ವ್ಯವಹಾರ ಕುದುರಿಸಲು ಲಂಚ ಪಡೆದ ಅಪರಾಧಕ್ಕಾಗಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಬಿಜೆಪಿಯ ಮಾಜಿ ಅಧ್ಯಕ್ಷ ಬಂಗಾರು ಲಕ್ಷ್ಮಣ್ ಅವರಿಗೆ ದೆಹಲಿ ಹೈಕೋರ್ಟ್ ಗುರುವಾರ ಜಾಮೀನು ನೀಡಿದೆ.

ಲಕ್ಷ್ಮಣ್ ಅವರು ಮಾರುವೇಷದ ಪತ್ರಕರ್ತರಿಂದ 1 ಲಕ್ಷ ರೂಪಾಯಿ ಲಂಚ ಪಡೆದಿದ್ದನ್ನು `ತೆಹಲ್ಕಾ~ ನಡೆಸಿದ ಕುಟುಕು ಕಾರ್ಯಾಚರಣೆ ಬಯಲಿಗೆ ಎಳೆದಿತ್ತು. ಆಗ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿತ್ತು.
 
ವೈಯಕ್ತಿಕ ಜಾಮೀನು ಮತ್ತು 50 ಸಾವಿರ ರೂಪಾಯಿಗಳ ಭದ್ರತಾ ಠೇವಣಿ ಪಡೆದು ಲಕ್ಷ್ಮಣ್ ಅವರನ್ನು ಬಿಡುಗಡೆ ಮಾಡಬಹುದು ಎಂದು ನ್ಯಾಯಮೂರ್ತಿ ಎ. ಕೆ. ಪಾಠಕ್ ಅವರು ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.